ಧರ್ಮಸ್ಥಳ: ರಾಜ್ಯ ಅಧ್ಯಕ್ಷ ಬಿ. ವೈ. ವಿಜಯೇಂದ್ರ ನೇತೃತ್ವದ ಬಿಜೆಪಿ ನಾಯಕರು ಭಾನುವಾರ ಬೆಳಿಗ್ಗೆ ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಎಸ್‌ಐಟಿ ತನಿಖೆಯ ನೆಪದಲ್ಲಿ ಧರ್ಮಸ್ಥಳದ ಬಗ್ಗೆ ಹರಡುತ್ತಿರುವ ಅಪಪ್ರಚಾರವನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿಜಯೇಂದ್ರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.