ದಕ್ಷಿಣ ಕನ್ನಡ : ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಪರಿಣಾಮ ಹಲವೆಡೆ ಮರ, ಧರೆ ಕುಸಿದು ಅಪಾರ ಹಾನಿಯುಂಟಾಗಿದೆ.
ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಗಡಾಯಿಕಲ್ಲು, ಬಂಡಾಜೆ, ಬೊಳ್ಳೆ, ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಜೂ.16 ರಿಂದ ಮುಂದಿನ ಆದೇಶದವರೆಗೆ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ ಎಂದು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

