ಮಂಗಳೂರು: ನಗರದ ಪಣಂಬೂರು ಎಂಸಿಎಫ್ ಬಳಿ ಕಾರ್ಕಳ–ಮೂಲ್ಕಿ–ಮಂಗಳೂರು ಮಾರ್ಗದ ಎಕ್ಸ್‌ಪ್ರೆಸ್ ಬಸ್ ರಸ್ತೆಗೆ ಉರುಳಿ ಬಿದ್ದ ಘಟನೆ ನಡೆದಿದೆ.

ಅಪಘಾತದಲ್ಲಿ ಬಸ್‌ನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಬಸ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ.

ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.