ಮಂಗಳೂರು: ಜುಲೈ 18 ರಂದು ಗುರುವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಶಾಲಾ ಕಾಲೇಜುಗಳಿಗೆ ಜೂನ್ 18 ರಂದು ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.