ಗುರುಪುರ: ಮಂಗಳೂರು ಹೊರವಲಯದ ಗುರುಪುರ ಕೈಕಂಬ ಸಮೀಪ ಇಂದು ರೌದ್ರಾವತಾರ ನಡೆದಿದೆ. ವಿರುದ್ಧ ದಿಕ್ಕಿನಿಂದ ಅತಿ ವೇಗವಾಗಿ ಬಂದ ಲಾರಿಯೊಂದು ಪ್ರಯಾಣಿಕರ ಬಸ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಬಸ್ ಚಾಲಕನ ಕಾಲು ಮುರಿದು ಹೋಗಿದ್ದು, ಸ್ಥಿತಿ ಗಂಭೀರವಾಗಿದೆ.

ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯಿಂದಾಗಿ ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸುತ್ತಿದ್ದಾರೆ.