ಮಂಗಳೂರು : ನಗರದ ಅತ್ತಾವರದಲ್ಲಿರುವ ಹೋಟೆಲ್ ಇಹಾಮ್ ಪ್ಯಾರಡೈಸ್ನಲ್ಲಿ ನಿನ್ನೆ ಸಂಜೆ ಸುಮಾರು 7 ಗಂಟೆ ವೇಳೆಗೆ ಅಗ್ನಿ ಅವಘಡ ಸಂಭವಿಸಿದೆ.

ಹೋಟೆಲ್ ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ಹಾಗೂ ನಷ್ಟದ ಪ್ರಮಾಣದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.