ಮಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸಲು ಸಮಯದ ಮಿತಿ ನಿಗದಿಪಡಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪಟಾಕಿ ಸದ್ದಿನ ಬಗ್ಗೆ ಮಾತ್ರ ಆಡಳಿತ ಪಕ್ಷದವರಿಗೆ ಕಾಳಜಿ ಇದೆಯೇ? ಬೇರೆ ಸದ್ದುಗಳು ಕೇಳಿಸುವುದಿಲ್ಲವೇ ಎಂದು ಪ್ರಶ್ನಿಸಿರುವ ಅವರು, ದೀಪಾವಳಿ ಹಬ್ಬವನ್ನು ಹಾಳು ಮಾಡುವ ಚಿಂತನೆ ಕಾಂಗ್ರೆಸ್ ಸರ್ಕಾರದ್ದಾಗಿದೆ ಎಂದು ಆರೋಪಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕ ವೇದವ್ಯಾಸ ಕಾಮತ್ ಸರ್ಕಾರದ ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಎಂಬುದಕ್ಕೆ ಇದೊಂದು ಮತ್ತೊಂದು ಉದಾಹರಣೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ವಾಗ್ದಾಳಿ ನಡೆಸಿದರು.