ಮಂಗಳೂರು : ಹವಾಮಾನ ಮುನ್ಸೂಚನೆಯಂತೆ ಜನವರಿ 27 ರಿಂದ 31 ರವರೆಗೆ ಅರಬ್ಬಿ ಸಮುದ್ರದಲ್ಲಿ ಭಾರೀ ಗಾಳಿ ಬೀಸುವುದರಿಂದ ಸಮುದ್ರವು ಪ್ರಕ್ಷುಬ್ಧವಾಗಿರುತ್ತದೆ.

ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಎಲ್ಲಾ ಮೀನುಗಾರರು ಜಾಗರೂಕತೆ ವಹಿಸುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.