ಮಂಗಳೂರು: ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೈ ಮಾಡಲು ಅಪಾರ್ಟ್ ಮೆಂಟ್ ಒಂದರಲ್ಲಿ 12 ಕೆಜಿಗೂ ಅಧಿಕ ಗಾಂಜಾ ಇಟ್ಟುಕೊಂಡಿದ್ದ 11 ಮಂದಿ ಕೇರಳ ಮೂಲದ ಕಾಲೇಜು ವಿದ್ಯಾರ್ಥಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತರನ್ನು ಕೇರಳದ ವಿದ್ಯಾರ್ಥಿಗಳ ಗುಂಪಾದ ಆದ್ವೈತ್‌ ಶ್ರೀಕಾಂತ್, ಮುಹಮ್ಮದ್ ಆಫ್ಸಿನ್, ಮುಹಮ್ಮದ್ ಸ್ಮಾನೀದ್, ನಿಬಿನ್ ಟಿ ಕುರಿಯನ್, ಮುಹಮ್ಮದ್ ಕೆಕೆ, ಮುಹಮ್ಮದ್ ಹನನ್, ಮುಹಮ್ಮದ್ ಶಾಮಿಲ್, ಅರುಣ್ ತೋಮಸ್, ಮುಹಮ್ಮದ್ ನಿಹಾಲ್ ಸಿ, ಮೊಹಮ್ಮದ್ ಜಾಸೀಲ್ ವಿ ಮತ್ತು ಸಿದಾನ್ ಪಿ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳೆಲ್ಲರೂ ಮಂಗಳೂರಿನ ಕಾಲೇಜಿನಲ್ಲಿ ಎರಡನೇ ವರ್ಷದ ಬಿಬಿಎ ವಿದ್ಯಾರ್ಥಿಗಳು ಎನ್ನಲಾಗಿದೆ.