ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಟೆಂಪೊವೊಂದು ಪಲ್ಟಿ ಹೊಡೆದು ಹೆದ್ದಾರಿಯ ಇನ್ನೊಂದು ಪಾರ್ಶ್ವದಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿ ಹೊಡೆದ ಘಟನೆ ಶುಕ್ರವಾರ ರಾ.ಹೆ. 75ರ ಶಿರಾಡಿ ಘಾಟ್ ಬಳಿಯ ಕೆಂಪುಹೊಳೆ ಎಂಬಲ್ಲಿ ನಡೆದಿದೆ.

ಘಟನೆಯಿಂದ ಟೆಂಪೊ ಚಾಲಕ ಗಾಯಗೊಂಡಿದ್ದು, ಬಸ್ಸಿನ ಮುಂಭಾಗ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.