ಮಂಗಳೂರು: ಇಂದು ಮುಂಜಾನೆಯಿಂದ ಎಡಬಿಡದೆ ಮಳೆ ಸುರಿಯುತ್ತಿದ್ದು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಹಾಗೂ ಎಲ್ಲಾ ಪಿಯು ಮತ್ತು ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.ಎಲ್ಲಾ ಪ್ರಾಥಮಿಕ ಮತ್ತು ಫೌಡ ಶಾಲೆ ಹಾಗೂ ಪದವಿ ಪೂರ್ವ ಕಾಲುಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಾಳೆಯಾಗುತ್ತಿದ್ದು . ಭಾರತೀಯ ಹವಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಇಂದು ಸೋಮವಾರ ರೆಡ್ ಅಲರ್ಟ್ ಘೋಷಣೆ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲುಜು ಗಳಿಗೆ ರಜೆ ಘೋಷಿಸಿದ್ದು ಮುಂಜಾಗ್ರತ ಕ್ರಮಗಳನ್ನು ಸೂಚಿಸಿದೆ.

