ಬಂಟ್ವಾಳ : ಶಂಕಿತ ಬಾಂಗ್ಲಾ ಪ್ರಜೆಗೆ ಪಾಸ್ ಪೋರ್ಟ್ ಮಾಡಿಕೊಡಲು ಸಹಾಯ ಮಾಡಿದ ಆರೋಪದ ಮೇಲೆ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತನನ್ನು ಪೊಲೀಸ್ ಕಾನ್ಸ್ಟೇಬಲ್ ಪ್ರದೀಪ್ ಎಂದು ಗುರುತಿಸಲಾಗಿದೆ. ಶಂಕಿತ ಬಾಂಗ್ಲಾ ಪ್ರಜೆ ಶಕ್ತಿದಾಸ್ ಎಂಬಾತನಿಗೆ ಪಾಸ್ ಪೋರ್ಟ್ ಪಡೆಯಲು ಸಹಾಯ ಆರೋಪ ಇವರ ಮೇಲಿದೆ. ಅದೇ ವಿಟ್ಲ ಠಾಣೆಯ ಕಾನ್ಸ್ಟೇಬಲ್ ಸಾಬೀ ಮಿರ್ಜಿ ನೀಡಿದ ದೂರಿನ ಆದಾರದ ಮೇಲೆ ಕಾನ್ಸ್ಟೇಬಲ್ ಪ್ರದೀಪ್ ನನ್ನು ಅರೆಸ್ಟ್ ಮಾಡಲಾಗಿದೆ.

ಈ ಹಿಂದೆ ಶಕ್ತಿದಾಸ್ ಪಾಸ್ ಪೋರ್ಟ್ ಅರ್ಜಿಯನ್ನು ಸಾಬೀ ಮಿರ್ಜಿ ತಿರಸ್ಕರಿಸಿದ್ದರು, ಆದರೆ ಇತ್ತೀಚೆಗೆ ಸಾಬೀ ಮಿರ್ಜಿ ಕರ್ತವ್ಯ ನಿಮಿತ್ತ ಬೇರೆ ಕಡೆಗೆ ಹೋದ ಕಾನ್ಸ್ಟೇಬಲ್ ಪ್ರದೀಪ್ ಸಹಾಯ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದೀಗ ಆರೋಪಿ ಕಾನ್ಸ್ಟೇಬಲ್ ಪ್ರದೀಪ್ ಅರೆಸ್ಟ್ ಆಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ.