ಮಂಗಳೂರು: ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಇಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಹಾಗೂ ಆರ್ದ ಪರಿಸ್ಥಿತಿ ಹೆಚ್ಚಾಗುವ ಸಾಧ್ಯತೆ ಇರುವುದಾಗಿ ಭಾರತದ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಪ್ರದೇಶಗಳಲ್ಲಿ ತಾಪಮಾನ ಹಾಗೂ ಆರ್ದ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ. ವಿಶೇಷವಾಗಿ ಮಧ್ಯಾಹ್ನ ವೇಳೆಯಲ್ಲಿ ಹೊರಗೆ ಹೋಗುವುದನ್ನು ಕಡಿಮೆ ಮಾಡುವುದು, ಹೆಚ್ಚು ನೀರು ಕುಡಿಯುವುದು ಹಾಗೂ ಆರೋಗ್ಯದ ಕಡೆ ಗಮನ ನೀಡುವುದು ಅಗತ್ಯವೆಂದು ತಜ್ಞರು ತಿಳಿಸಿದ್ದಾರೆ.

ಬಿಸಿ ಮತ್ತು ಆರ್ದ ಪರಿಸ್ಥಿತಿಯ ಪರಿಣಾಮವಾಗಿ ದೇಹದಲ್ಲಿ ದಣಿವು, ತಲೆಸುತ್ತು ಹಾಗೂ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ ಹಿರಿಯರು, ಮಕ್ಕಳು ಮತ್ತು ಹೊರಾಂಗಣದಲ್ಲಿ ಕೆಲಸ ಮಾಡುವವರು ವಿಶೇಷ ಜಾಗ್ರತೆ ವಹಿಸಬೇಕು ಎಂದು ಇಲಾಖೆ ಮಾಹಿತಿ ನೀಡಿದೆ.

View this post on Instagram

A post shared by News Karnataka (@newskarnataka)