ಮಂಗಳೂರು: ನಾನು ಸಚಿವನಾಗಿಯೂ, ಪ್ರವಾಸಿಯಾಗಿಯೂ ಮೈಸೂರಿನ ಟಿಪ್ಪು ಸುಲ್ತಾನ್ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ್ದೇನೆ ಎಂದು ಯು.ಟಿ. ಖಾದರ್ ಹೇಳಿಕೆ ನೀಡಿದರು.

ಅದೇ ರೀತಿ ರಂಗನಾಥ ಸ್ವಾಮಿ ದೇವಸ್ಥಾನಕ್ಕೂ ಭೇಟಿ ನೀಡಿದ್ದೇನೆ. ಸ್ಥಳಗಳಿಗೆ ಭೇಟಿ ನೀಡಿದ ಮಾತ್ರಕ್ಕೆ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ ಎಂದು ಅರ್ಥವಲ್ಲ. ಟಿಪ್ಪು ಸಮಾಧಿಗೆ ಭೇಟಿ ನೀಡಿದ್ದನ್ನೇ ಮುಂದಿಟ್ಟುಕೊಂಡು ತಪ್ಪು ಪ್ರಚಾರ ಮಾಡಲಾಗುತ್ತಿದೆ. ಪತ್ರಕರ್ತರ ಪ್ರಶ್ನೆಗೆ ಮಂಗಳೂರಿನ ಪತ್ರಿಕಾಗೋಷ್ಠಿಯಲ್ಲಿ ಯು.ಟಿ. ಖಾದರ್ ಸ್ಪಷ್ಟನೆ ನೀಡಿದರು.