ಮೂಡುಬಿದಿರೆ: ಮಂಗಳೂರಿನ ಮೂಡುಬಿದಿರೆ ಸಮೀಪದ ತೋಡಾರ್ ಪಡೋಡ್ಡಿ ಎಂಬಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಮೂಡುಬಿದಿರೆ ಪೊಲೀಸರು, ವಾಹನವೊಂದರಲ್ಲಿ ಹಿಂಸಾತ್ಮಕ ರೀತಿಯಲ್ಲಿ ತುರುಕಿದ್ದ 9 ದನಗಳನ್ನು ರಕ್ಷಿಸಿದ್ದಾರೆ. ಪೊಲೀಸರ ಬರುವಿಕೆಯನ್ನು ಕಂಡು ದನಗಳ್ಳರು ಪರಾರಿಯಾಗಿದ್ದು, ಅವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮೂಡುಬಿದಿರೆ ಪೊಲೀಸರ ಈ ತ್ವರಿತ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.

View this post on Instagram

A post shared by News Karnataka (@newskarnataka)