ವಿಟ್ಲ: ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನನ್ನು ಬಂಧಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ.

ಬಂಟ್ವಾಳ ತಾಲೂಕು ಕೊಳ್ಳಾಡು ನಿವಾಸಿ, ಮಹಮ್ಮದ್ ಅಸ್ಪೀರ್ (26) ಬಂಧಿತ ಆರೋಪಿ. ಅಮಲು ಪದಾರ್ಥ ಸೇವಿಸಿ ದ್ವಿಚಕ್ರ ವಾಹನವನ್ನು ಚಲಾಯಿಸಿದ ಆರೋಪದಡಿ ಆತನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೇ.03 ರಂದು ಮಧ್ಯಾಹ್ನದ ವೇಳೆ ವಿಟ್ಲ ಠಾಣಾ ಎಸ್.ಐ ಬಿ.ಎಸ್.ನಾಯಕ್ ಸಿಬ್ಬಂದಿಯೊಂದಿಗೆ ವಿಟ್ಲ ನಾಲ್ಕು ಮಾರ್ಗ ಜಂಕ್ಷನ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಅದೇ ದಾರಿಯಾಗಿ ಬಂದ ದ್ವಿಚಕ್ರ ವಾಹನವೊಂದರಲ್ಲಿ ಅದರ ಸವಾರ ಹೆಲ್ಮಟ್ ಧರಿಸದೆ ವಾಹನ ಚಲಾಯಿಸಿಕೊಂಡು ಬರುತ್ತಿರುವುದು ಕಂಡುಬಂದಿತ್ತು.

ಕೂಡಲೇ ಆತನನ್ನು ತಡೆದು ನಿಲ್ಲಿಸಿ ವಿಚಾರಣೆ ನಡೆಸಿದಾಗ ಸವಾರ ಎಸ್.ಐ. ಬಿ.ಎಸ್.ನಾಯಕ್‌ರೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ. ಮಹಮ್ಮದ್ ಅಸ್ಟೀರ್ನ ವರ್ತನೆಯಿಂದ ಸಂಶಯಗೊಂಡ ಪೊಲೀಸರು ಆತ ಅಮಲು ಪದಾರ್ಥ ಸೇವಿಸಿರುವ ಬಗ್ಗೆ ಸಂಶಯಗೊಂಡು ಈ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಮಹಮ್ಮದ್ ಅಸ್ಟೀರ್ ಅಮಲು ಪದಾರ್ಥ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದ.

ಬಳಿಕ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಆತ ಮಾದಕವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಸದ್ಯ ಆರೋಪಿಯನ್ನು ಬಂಧಿಸಿರುವ ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

View this post on Instagram

A post shared by News Karnataka (@newskarnataka)