ಉಡುಪಿ: ಉಡುಪಿಯ ಇಂದ್ರಾಳಿ ರೈಲು ಸೇತುವೆ ಕಾಮಗಾರಿಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸದ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಸ್ವತಹ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 2018 ರಲ್ಲಿ ಸೇತುವೆ ನಿರ್ಮಾಣ ಪ್ರಕ್ರಿಯೆ ಆರಂಭವಾಗಿತ್ತು.

ಕಾಮಗಾರಿ ವಿಳಂಬದಿಂದಾಗಿ ಸಾರ್ವಜನಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಪ್ರಮುಖ ಗುತ್ತಿಗೆದಾರ ಹಾಗೂ ಉಪಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಸಂಬಂಧಪಟ್ಟವರಿಗೆ ಪತ್ರ ಬರೆಯುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ. ಜನವರಿ ಮೊದಲ ವಾರದಲ್ಲಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಪೊಲೀಸ್ ಠಾಣೆಯಲ್ಲಿ ಗುತ್ತಿಗೆದಾರ ಮುಚ್ಚಳಿಕೆ ಬರೆದು ಕೊಟ್ಟಿದ್ದ.

ಇದರ ಹೊರತಾಗಿಯೂ ಕಾಮಗಾರಿ ಪೂರ್ಣಗೊಳ್ಳದೆ ಇರುವುದರಿಂದ ಸಾರ್ವಜನಿಕ ಹಿತ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ವಿಳಂಬ ಕಾಮಗಾರಿ ಸಾರ್ವಜನಿಕ ಹೋರಾಟಗಳಿಗೆ ಕಾರಣವಾಗಿದೆ.