ಮಂಗಳೂರು : ರಾಜ್ಯದಲ್ಲಿ ಕಳೆದ 20 ತಿಂಗಳಿನಿಂದಲೂ ನಿರಂತರ ಬೆಲೆ ಏರಿಕೆ, ದಲಿತರ ಹಣ ಲೂಟಿ, ಹಿಂದೂ ವಿರೋಧಿ ನೀತಿ, ಮುಸ್ಲಿಂ ಓಲೈಕೆ, ರೈತರ ನಿರ್ಲಕ್ಷ್ಯದ ಮೂಲಕ ಕಾಂಗ್ರೆಸ್‌ ದುರಾಡಳಿತ ನಡೆಸುತ್ತಿದೆ.

ಇದರ ವಿರುದ್ದ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಆರಂಭ ಗೊಂಡಿದ್ದು, ಎ.9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದರು.

ನಗರದ ಅಟಲ್ ಸೇವಾ ಕೇಂದ್ರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕರು, ಜನತೆಯಲ್ಲಿ ಮಡುಗಟ್ಟಿರುವ ಆಕ್ರೋಶದ ಬಿಸಿಯನ್ನು ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮುಟ್ಟಿಸುವ ಸಲುವಾಗಿ ಅಂದು ಮಧ್ಯಾಹ್ನ 3 ಕ್ಕೆ ನಗರದ ಅಂಬೇಡ್ಕರ್ ಸರ್ಕಲ್ ನಿಂದ ಕ್ಲಾಕ್ ಟವರ್‌ವರೆಗೆ ಜನಾಕ್ರೋಶ ಯಾತ್ರೆ ನಡೆಯಲಿದೆ.