ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (NH-75) ದುರಸ್ಥಿ, ನಿರ್ವಹಣಾ ಕಸರತ್ತು, ಹಿಂಪಡೆದ ಕಾಮಗಾರಿಗಳು ಹಾಗೂ ರಸ್ತೆ ಪರಿಸ್ಥಿತಿಯ ಬಗ್ಗೆ ಕಿಶೋರ್ ಕುಮಾರ್ ಪುತ್ತೂರು ಇವರು ವಿಧಾನ ಪರಿಷತ್ತಿನಲ್ಲಿ ಸರ್ಕಾರದ ಗಮನ ಸೆಳೆದರು.
ಹಾಗು ಮಳೆಗಾಲ ಆರಂಭವಾಗುತ್ತಿದ್ದಂತೆ ರಸ್ತೆ ಅವ್ಯವಸ್ಥೆ ಹೆಚ್ಚಾಗಿದ್ದು, ಪ್ರಯಾಣಿಕರು ಹಾಗೂ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಕೂಡಲೇ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಸರ್ಕಾರವನ್ನ ಒತ್ತಾಯಿಸಿದರು.

