ಮಂಗಳೂರು : ತನ್ನ ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಗರ್ಭವತಿ ಮಾಡಿ ಬಳಿಕ ಮದುವೆಗೆ ನಿರಾಕರಿಸಿ ನಾಪತ್ತೆಯಾಗಿದ್ದ ಪುತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ಜೆ ರಾವ್ ನ್ನು ಇದೀಗ ಮೈಸೂರಿನಲ್ಲಿ ಅರೆಸ್ಟ್ ಮಾಡಲಾಗಿದೆ.
ಯುವತಿ ಗರ್ಭಿಣಿಯಾಗಿರುವುದು ಗೊತ್ತಾಗುತ್ತಿದ್ದಂತೆಯೇ ಕೈಕೊಟ್ಟಿದ್ದ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಎನ್ನುವವರ ಪುತ್ರ ಕೃಷ್ಣ ರಾವ್‌ನನ್ನು ಇದೀಗ ಪೊಲೀಸರು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.
ಗರ್ಭಿಣಿಯಾದ ಬಳಿಕ ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಆತ ಕೈಕೊಟ್ಟಿದ್ದರಿಂದ ಕಂಗಾಲಾದ ಯುವತಿಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ನಂತರ ಆತ ಬಂಧನದ ಭಯದಿಂದ ಎಸ್ಕೇಪ್ ಆಗಿದ್ದ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣಾ ಪೊಲೀಸರು ದಿನಾಂಕ: 04.07.2025 ರಂದು ರಾತ್ರಿ ಮೈಸೂರಿನ ಟಿ ನರಸಿಪುರ ಎಂಬಲ್ಲಿ ವಶಕ್ಕೆ ಪಡೆದು ಠಾಣೆಗೆ ಕರೆತಂದಿರುತ್ತಾರೆ. ಆರೋಪಿತನ ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು. ಕಳೆದ 10 ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಬೇಕೆಂದು ಹಲವು ಸಂಘಟನೆಗಳಿಂದ ಪ್ರತಿಭಟನೆಯೂ ನಡೆದಿತ್ತು.

