ಮಂಗಳೂರು: ರಾತ್ರಿ ಮಳೆಗೆ ಮಂಗಳೂರಿನ ನಾಗುರಿ ಎಂಬಲ್ಲಿಮಣ್ಣು ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮಣ್ಣಿನಡಿ ಸಿಲುಕಿಕೊಂಡಿದ್ದ ಮೂವರನ್ನು ರಕ್ಷಣೆ ಮಾಡಲಾಗಿದೆ.
ಒಬ್ಬ ಪುರುಷ, ಇಬ್ಬರು ಹೆಣ್ಣು ಮಕ್ಕಳ ರಕ್ಷಣೆ ಮಾಡಲಾಗಿದ್ದು, ಒಬ್ಬ ಮಹಿಳೆ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ತೆರಳಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಘಟನೆಯಲ್ಲಿ ಅನಾಮಿಕ ಚೌರಾಸಿಯ (8), ಪರಿ (4), ಶಾಂತ (46), ಮೃತ ಪಟ್ಟಿದ್ದಾರೆ. ರಕ್ಷಣಾ ಕಾರ್ಯದಲ್ಲಿ ಅಲ್ಕಾ (14), ಅನುಷಾ (11) ಬಾಲಕೃಷ್ಣ (48) ಬದುಕಿ ಉಳಿದವರು ಎಂಬ ಮಾಹಿತಿ ತಿಳಿದು ಬಂದಿದೆ. ಇವರು ಮೂಲತ ಬಿಹಾರ ರಾಜ್ಯದವರಾಗಿದ್ದು, ಪ್ರಸ್ತುತ ಕಂಕನಾಡಿ ಗ್ರಾಮದ, ಕಂಕನಾಡಿ ಪೊಲೀಸ್ ಠಾಣಾ ಹಿಂಭಾಗದಲ್ಲಿ ಕಳೆದ 20 ವರ್ಷಗಳಿಂದ ವಾಸವಿದ್ದರು.

