ಮಂಗಳೂರು: ಮುಡಾ ವ್ಯಾಪ್ತಿಯಲ್ಲಿ ಕೊಣಾಜೆ, ಕುಂಜತ್ತಬೈಲ್ ಹಾಗೂ ಚೇಳ್ಯಾರು ಮೂರು ಕಡೆ ವಸತಿ ಬಡಾವಣೆಗೆ ಲೇಔಟ್ ಗಳನ್ನು ಮಾಡಲಾಗುತ್ತಿದೆ.
ಈ ಕಾಮಗಾರಿಗಳನ್ನು ಶೀಘ್ರವಾಗಿ ಮುಗಿಸಿ ಸಾರ್ವಜನಿಕರಿಗೆ ಖರೀದಿಗೆ ಅವಕಾಶ ನೀಡಬೇಕು. ಕೊಣಾಜೆಯಲ್ಲಿ ನವೆಂಬರ್‌ನೊಳಗೆ ಕಾಮಗಾರಿ ಪೂರ್ತಿಗೊಳಿಸಲು ಸೂಚಿಸಲಾಗಿದೆ. ಶೇ. 20ರಷ್ಟು ಮಾತ್ರವೇ ಬುಕ್ಕಿಂಗ್ ಆಗಿದ್ದು, ಕಾಮಗಾರಿ ಶೀಘ್ರ ಮುಗಿದರೆ ಬುಕ್ಕಿಂಗ್‌ಗೆ ವೇಗ ಸಿಗಲಿದೆ.
ಇಲ್ಲಿನ ಆದಾಯವನ್ನು ಇನ್ನೊಂದು ಬಡಾವಣೆಯ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯ ಆಗಲಿದೆ. ನವೆಂಬರ್ ತಿಂಗಳಲ್ಲಿ ಮತ್ತೆ ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕುಂಜತ್ತಬೈಲ್ ಲೇಔಟ್‌ನಲ್ಲಿ ಸಮಸ್ಯೆ ಯಾಗಿದ್ದು, ಅಲ್ಲಿ ಮುಂದೆ ಏನು ಮಾಡಬೇಕು ಎಂದು ತೀರ್ಮಾನಿಸಬೇಕಾಗಿದೆ.
ಭೂ ಖರೀದಿಯಾಗಿದೆ. ಅದಕ್ಕೆ ಮಾಡಿರುವ ವೆಚ್ಚ ನಷ್ಟ ಆಗದಂತೆ ಸ್ಪಷ್ಟವಾದ ತೀರ್ಮಾನಕ್ಕೆ ಬರಬೇಕಾಗಿದೆ. ಅವೈಜ್ಞಾನಿಕವಾಗಿ ಹೆಚ್ಚಿನ ಬೆಲೆಗೆ ಖರೀದಿ ಮಾಡಿರುವುದು ಸಮಸ್ಯೆ ಆಗಿದೆ. ಅದು ನಷ್ಟ ಆಡುವ ಪ್ರಾಜೆಕ್ಟ್ ಆಗಿ ಕಂಡು ಬರುತ್ತಿದೆ. ಆದ್ದರಿಂದ ಯಾವ ರೀತಿಯಲ್ಲಿ ಹೊರ ಬರಬೇಕಾಗಿದೆ ಎಂಬುದನ್ನು ನೋಡಬೇಕಾಗಿದೆ. ಚೇಳ್ಯಾರು ವಸತಿ ಬಡಾವಣೆಯ ಕಾಮಗಾರಿ ಮುಗಿಸಲು ಹಣದ ಅಗತ್ಯವಿದೆ.
ಅದಕ್ಕಾಗಿ ಕೊಣಾಜೆಯ ಯೋಜನೆ ಪೂರ್ಣಗೊಳಿಸಿ ಅಲ್ಲಿನ ಆದಾಯದಿಂದ ಚೇಳ್ಳಾರು ವಸತಿ ಬಡಾವಣೆಯ ಕಾಮಗಾರಿಯನ್ನು ಪೂರ್ಣಗೊಳಿಸಬಹುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

