ಮಂಗಳೂರು: ಮಂಗಳೂರಿನ ಪಾಲ್ದನೆ ಸಮೀಪದ ನೆಕ್ಕರೆ ಹಾಗೂ ಆಸುಪಾಸಿನಲ್ಲಿ ಕಳೆದ ಕೆಲವು ದಿನಗಳಿಂದ ಓಡಾಡುತ್ತಿದ್ದ ಬೃಹತ್ ಗಾತ್ರದ ಚಿರತೆಯನ್ನು ಕೆಲರಾಯ್ ಕ್ರಾಸ್ ನೆಕ್ಕರೆ ಪದವು ಎಂಬಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಬೋನು ಇರಿಸಿ ಸೆರೆ ಹಿಡಿದಿದ್ದಾರೆ.

ಚಿರತೆಯ ಇರುವಿಕೆ ಬಗ್ಗೆ ಸ್ಥಳೀಯರು ಸ್ಥಳೀಯ ಮಾಜಿ ಕಾರ್ಪೊರೇಟರ್ ಹಾಗೂ ಮಾಜಿ ಮೇಯರ್ ಭಾಸ್ಕರ್ ಕೆ. ಅವರಿಗೆ ದೂರು ನೀಡಿದ್ದು, ಅವರು ಸಕಾಲದಲ್ಲಿ ಸ್ಪಂದಿಸಿ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿ ಕಾರ್ಯಾಚರಣೆ ನಡೆಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅರಣ್ಯ ಇಲಾಖೆಯ ಕಾರ್ಯ ವೈಖರಿಯ ಬಗ್ಗೆ ಊರಿನ ಜನರು ಹರ್ಷ ವ್ಯಕ್ತ ಪಡಿಸಿದ್ದಾರೆ.

View this post on Instagram

A post shared by News Karnataka (@newskarnataka)