ಮಂಗಳೂರು : ಲೋಕಾಯುಕ್ತ ಜನ ಸಂಪರ್ಕ ಸಭೆ  ಆಗಸ್ಟ್  19 ರಂದು ಬೆಳಿಗ್ಗೆ 11 ಗಂಟೆಯಿಂದ ಉಳ್ಳಾಲ ನಗರಸಭೆ ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ದಿನದಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ.

ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು. ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದು ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದು.

ಅರ್ಜಿದಾರರು ನಮೂನೆ 1 & ॥ ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.