ಮಂಗಳೂರು: ಮಂಗಳೂರು ವ್ಯಾಪ್ತಿಯ ಪ್ರಾದೇಶಿಕ ಉಪ ಔಷಧ ನಿಯಂತ್ರಕ ಬಾಬು ಬಿ.ಎನ್ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
ಮಂಗಳೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದಾಳಿ ನಡೆಸಲಾಗಿದ್ದು, ಲೋಕಾಯುಕ್ತ ಎಸ್ಪಿ ದಿನೇಶ್ ಕುಮಾರ್ ಮಾರ್ಗದರ್ಶನದಲ್ಲಿ 06 ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ತಂಡದ ಕಾರ್ಯಾಚರಣೆ ನಡೆಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಟೌನ್‌ನಲ್ಲಿರುವ ವಾಸದ ಮನೆಗಳು, ವಾಣಿಜ್ಯ ಮಳಿಗೆಗಳು. ಬೆಂಗಳೂರು ನಗರದಲ್ಲಿನ ಫ್ಲಾಟ್ ಮತ್ತು ವಾಸದ ಮನೆಗಳು. ಮಂಗಳೂರಿನಲ್ಲಿರುವ ವಾಸ್ತವ್ಯದ ಮನೆ ಹಾಗೂ ಕರ್ತವ್ಯ ನಿರ್ವಹಿಸುವ ಕಛೇರಿಗಳ ಮೇಲೆ ದಾಳಿ ನಡೆಸಲಾಯಿತು.
ದಾಳಿ ವೇಳೆ ರೂ.3,37,04,000.00/- ಮೌಲ್ಯದ ಸ್ಥಿರ & ಚರಾಸ್ತಿ ಪತ್ತೆಯಾಗಿದೆ. ಬೆಂಗಳೂರಿನ ವಾಸದ ಮನೆಯಲ್ಲಿ ರೂ. 23,64,000 ನಗದು ಹಾಗೂ ಬೆಲೆಬಾಳುವ ಚಿನ್ನ, ಬೆಳ್ಳಿಯ ಆಭರಣಗಳು ವಶಕ್ಕೆ ಪಡೆಯಲಾಗಿದೆ.

