ಮಂಗಳೂರು: ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ದುರಂತ ವಿಮಾನ ಅಪಘಾತದ ಬಗ್ಗೆ ಮಂಗಳೂರಿನ ಬಿಷಪ್ ಪರಮ ಪೂಜ್ಯ ಡಾ. ಪೀಟರ್ ಪಾಲ್ ಸಲ್ಡಾನಾ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
“ಈ ದುರಂತ ಘಟನೆಯಲ್ಲಿ ಹಲವಾರು ಜೀವಗಳು ನಷ್ಟವಾಗಿರುವುದು ನಿಜಕ್ಕೂ ಹೃದಯವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪವನ್ನು ಅರ್ಪಿಸುತ್ತೇನೆ ಮತ್ತು ದೇವರು ಅಗಲಿದ ಆತ್ಮಗಳಿಗೆ ಶಾಶ್ವತ ಶಾಂತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಬಿಷಪ್ ಹೇಳಿದ್ದಾರೆ.

