ಮಂಗಳೂರು: ನಗರ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಬಿ.ಎನ್.ಎಸ್ ಪ್ರಕರಣದಲ್ಲಿ ಅಪರಿಚಿತ ವ್ಯಕ್ತಿಯು TRAI ನಿಂದ ಪ್ರತಿನಿಧಿಸಿ ಕರೆ ಮಾಡುವುದಾಗಿ ತಿಳಿಸಿ ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬ್ರ ರಿಜಿಸ್ಟರ್ ಆಗಿದ್ದು,

ಮುಂಬೈನ ಅಂಧೇರಿ(E)ಯಲ್ಲಿ ಹಲವು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಒಳಗೊಂಡಿದ್ದು, ಮಾರ್ಕೆಟಿಂಗ್ ನೆಪದಲ್ಲಿ ನಿಮಗೆ ಸಂಬಂಧಿಸಿದ ಮೊಬೈಲ್ ನಂಬ್ರದಿಂದ ಕಾಲ್ ಮಾಡಿ ಕಿರುಕುಳ ಕೊಡುತ್ತಿರುವುದರ ಬಗ್ಗೆ FIR ದಾಖಲಾಗಿದ್ದು ಕೂಡಲೇ ಅಂಧೇರಿ(E) ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು ಇಲ್ಲದಿದ್ದಲ್ಲಿ ನಿಮ್ಮ ಮೊಬೈಲ್ ನಂಬ್ರ 9967014480 ನೇದರ ಸೇವೆಯನ್ನು 2 ಗಂಟೆಗಳಲ್ಲಿ ಕೊನೆಗೊಳಿಸ ಲಾಗುವುದು ಎಂಬುದಾಗಿ ತಿಳಿಸಿ ಅಲ್ಲದೇ ಅಂಧೇರಿಯ ಕೆನರಾ ಬ್ಯಾಂಕ್ ನಲ್ಲಿ ಫಿರ್ಯಾದಿದಾರರ ಹೆಸರಿನಲ್ಲಿ ಖಾತೆ ತೆರೆದು ವಂಚನೆಗೆ ಬಳಸಲಾಗಿದ್ದು,

ಇದಕ್ಕೆ Identity ಬಳಸಿ ಸಿಮ್ ಖರೀದಿಸಿರುವುದಾಗಿಯೂ, ಆ ಕಾರಣದಿಂದ ಫಿರ್ಯಾದುದಾರರ ಬಂಧಸಿ ಸೆರೆವಾಸಕ್ಕೆ ಒಳಗಾಗಿಸುವದಾಗಿ ತಿಳಿಸಿ, ಡಿಜಿಟಲ್ ಆರೆಸ್ಟ್ ಮಾಡುವುದಾಗಿ ಬಿಂಬಿಸಿ ಪಿರ್ಯಾದಿದಾರರಿಂದ ಹಂತ ಹಂತವಾಗಿ ಒಟ್ಟು ರೂ.1,71,00,000/- ಹಣವನ್ನು ಪಡೆದು ವಂಚನೆ ಮಾಡಿರುವುದಾಗಿದೆ ಎಂಬಿತ್ಯಾದಿಯಾಗಿ ದೂರು ನೀಡಿದಂತೆ ಪ್ರಕರಣ ದಾಖಲಿಸಿಕೊಂಡು ಪ್ರಕರಣದ ತನಿಖೆ ಕೈಗೊಳ್ಳಲಾಗಿರುತ್ತದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಭಾಗಿಯಾದ ಆರೋಪಿತನಾದ ಆಕಾಶ್ ಎ, ಪ್ರಾಯ (22) ವರ್ಷ ತಂದೆ: ಅಶೋಕನ್ ಎ. ವಾಸ: ಚೊಕ್ಕತ್,ಚಿರಕ್ಕಲ್ ತಝಾಮ್,ಪಳ್ಳಿಯೊಲ್,ಮಾವೂರ್ ಕೋಝಿಕೋಡ್ ಕೇರಳ ರಾಜ್ಯ-673661 ಎಂಬಾತನು ತನ್ನ ಬ್ಯಾಂಕ್ ಖಾತೆಯನ್ನು ಸೈಬರ್ ಅಪರಾಧಕ್ಕೆ ಉಪಯೋಗಿಸಿಕೊಂಡಿರುವದಾಗಿದೆ. ಸದ್ರಿ ಆರೋಪಿತನನ್ನು ಕೇರಳಕ್ಕೆ ತೆರಳಿ ವಶಕ್ಕೆ ಪಡೆದುಕೊಂಡು ಬಂದಿದ್ದು, ದಸ್ತಗಿರಿ ಕ್ರಮ ಜರುಗಿಸಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಸದ್ರಿ ಕಾರ್ಯಾಚರಣೆಯು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗರವಾಲ್ ಐಪಿಎಸ್, ಡಿಸಿಪಿ (ಕಾಮತ್ತುಸು) ಶ್ರೀ ಸಿದ್ದಾರ್ಥ ಗೋಯಲ್, ಡಿಸಿಪಿ (ಅ&ಸಂ) ಶ್ರೀ ರವಿಶಂಕರ್ ರವರ ಮಾರ್ಗದರ್ಶನದಂತೆ ನಡೆದಿದ್ದು, ಸೆನ್ ಠಾಣಾಧಿಕಾರಿಯಾದ ಎಸಿಪಿ ಶ್ರೀ ರವೀಶ್ ನಾಯಕ ಮತ್ತು ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ಸತೀಶ್ ಎಂ ಪಿ ನೇತೃತ್ವದಲ್ಲಿ ಸದ್ರಿ ಪ್ರಕರಣದಲ್ಲಿ ಇನ್ನುಳಿದ ಆರೋಪಿತರ ಪತ್ತೆಗೆ ತನಿಖೆ ಮುಂದುವರೆದಿರುತ್ತದೆ.