ಮಂಗಳೂರು : ಮನೆಯಲ್ಲಿ ಎಂಡಿಎಂಎ ದಾಸ್ತಾನು ಮಾಡಿದ್ದ ನಾಲ್ವರು ಆರೋಪಿಗಳ ಸಹಿತ ಲಕ್ಷಾಂತರ ದೂ ಮೌಲ್ಯದ ಮಾದಕ ವಸ್ತುಗಳನ್ನು ವಿಟ್ಲ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡ ಘಟನೆ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಬಂಧಿತರಿಂದ ರೂ 1,79,700/- ಅಂದಾಜು ಮೌಲ್ಯದ 17.97 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.

ಬಂಟ್ವಾಳ, ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ನಿವಾಸಿ ಅಶ್ರಫ್ ಜಿ (38), ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್ ಎ ಎಂಬವರನ್ನು ಬಂಧಿಸಲಾಗಿದೆ. ವಿಟ್ಲ ಠಾಣಾ ವ್ಯಾಪ್ತಿಯ ಬಂಟ್ವಾಳ ನೇರಳಕಟ್ಟೆ ಇಂದಿರಾ ನಗರ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿರುವ ಅಶ್ರಪ್ ಜಿ ಎಂಬಾತನು ತನ್ನ ಮನೆಯಲ್ಲಿ ಮಾದಕ ವಸ್ತುವಾದ ಎಂಡಿಎಂಎ ಸಂಗ್ರಹಿಸಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿರುವುದಾಗಿ ಮಾಹಿತಿಯ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸರ ತಂಡ ದಾಳಿ ನಡೆಸಿದೆ.

ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ, ಬಂಟ್ವಾಳ ನಿವಾಸಿ ಅಶ್ರಫ್ ಜಿ (38), ಎಂಬಾತನು ವಾಸವಿದ್ದ ಮನೆಯಲ್ಲಿ ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್ ಎ ರವರೊಂದಿಗೆ ಸೇರಿಕೊಂಡು ಮನೆಯಿಂದ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ. ದಾಳಿಯ ವೇಳೆನೆಯೊಳಗೆ ದಾಸ್ತಾನು ಇರಿಸಲಾಗಿದ್ದ ಮಾದಕ ವಸ್ತುಗಳ ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

View this post on Instagram

A post shared by News Karnataka (@newskarnataka)