ಮಂಗಳೂರು : ಮಹಾರಾಷ್ಟ್ರ ಪೊಲೀಸರು ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕನ್ನು ಪತ್ತೆ ಹಚ್ಚಿ ಕೋಟ್ಯಂತರ ರೂ.ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಇದು ರಾಜ್ಯ ಮತ್ತು ಕೇಂದ್ರ ಸರಕಾರಗಳ ಕಾನೂನು ಸುವ್ಯವಸ್ಥೆ ಮತ್ತು ಗುಪ್ತಚರ ಇಲಾಖೆಯ ಕಾರ್ಯಕ್ಷಮತೆಯ ಮೇಲೆ ಗಂಭೀರ ಪ್ರಶ್ನೆ ಹುಟ್ಟು ಹಾಕಿದೆ.
ಈ ವೈಫಲ್ಯವನ್ನು ಖಂಡಿಸಿ ಮೈಸೂರು ಹಾಗೂ ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡುವ ಉದ್ದೇಶದಿಂದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಆ.12ರಂದು ಮೈಸೂರು ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಮಂಗಳೂರು ವಿಭಾಗ ಸಂಚಾಲಕ ಸುವಿತ್ ಶೆಟ್ಟಿ ತಿಳಿಸಿದ್ದಾರೆ.

