ಮಂಗಳೂರು: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ N D A ಅಭ್ಯರ್ಥಿಗಳು ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಕಚೇರಿ, ಕೊಡಿಯಾಲ್ ಬೈಲ್ ನಲ್ಲಿ ವಿಜಯೋತ್ಸವ ಮಾಡಲಾಯಿತ್ತು.
ಪಟಾಕಿ ಸಿಡಿಸಿ ಸಿಹಿ ತಿಂಡಿ ಪರಸ್ಪರ ಹಂಚುವ ಮೂಲಕ ಸಂಭ್ರಮಿಸಲಾಯಿತ್ತು. ನೆರೆದ ಬಿಜೆಪಿ ಮುಖಂಡರು ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಜೈಕಾರ ಕೂಗಿದರು. ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ್ ಕಾಮತ್, ಭರತ್ ರಾಜ್ ಶೆಟ್ಟಿ, ಕಿಶೋರ್ ಕುಮಾರ್, ಮೋನಪ್ಪ ಭಂಡಾರಿ ಸಹಿತ ಮಾಜಿ ಕಾರ್ಪೋರೇಟೋರ್ಸ್ ಉಪಸ್ಥಿತರಿದ್ದರು.

