ಬಂಟ್ವಾಳ: ಫಲ್ಗುಣಿ ನದಿಯಲ್ಲಿ ಏಕಾಏಕಿ ನೀರು ಏರಿಕೆಯಾಗಿದ್ದು, ಪೊಳಲಿ ಸಮೀಪದ ಅಮ್ಮುಂಜೆ ಗ್ರಾಮದ ಹೊಳೆಬದಿಯ ಕಡಪು ಕರಿಯ ಎಂಬಲ್ಲಿ ತಗ್ಗು ಪ್ರದೇಶ ಭಾಗಶಃ ಮುಳುಗಡೆಯಾಗಿದೆ.

ಸುಮಾರು 8 ಕುಟುಂಬಗಳಿಗೆ ನೀರು ನುಗ್ಗಿದ್ದು ಎಲ್ಲಾ ಕುಟುಂಬಗಳನ್ನು ತಹಶೀಲ್ದಾರ್ ಅರ್ಚನಾ ಭಟ್ ಅವರ ನಿರ್ದೇಶನದಂತೆ ತಾಲೂಕು ಆಡಳಿತ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳ ನೆರವಿನಿಂದ ರಕ್ಷಣೆ ಕಾರ್ಯ ಮಾಡುತ್ತಿದ್ದಾರೆಪಲ್ಗುಣಿ ನದಿಯಲ್ಲಿ ನೀರು ಏರಿಕೆಯಾದ ಬಳಿಕ ಕೃತಕ ನೆರೆಯ ರೂಪದಲ್ಲಿ ಈ 8 ಮನೆಗಳಿಗೆ ನೀರು ನುಗ್ಗಿದೆ ಎನ್ನಲಾಗಿದೆ.

ಅದರಲ್ಲಿ ಮೂರು ಮನೆಗಳು ಅಪಾಯಕಾರಿಯಾಗಿದ್ದು, ಇದೀಗ ಅಗ್ನಿಶಾಮಕ ದಳದ ಬೋಟ್ ಮೂಲಕ ಅವರನ್ನು ರಕ್ಷಣೆಯಲ್ಲಿ ತೊಡಗಿದ್ದಾರೆ.
ನದಿಯಲ್ಲಿ ಕಸದ ರಾಶಿಯಿಂದ ರಕ್ಷಣಾ ಕಾರ್ಯಕ್ಕೆ ಕೊಂಚ ಮಟ್ಟಿಗೆ ತೊಂದರೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

