ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಬಂಟ್ವಾಳ ನಗರ‌ ಪೊಲೀಸ್ ಠಾಣೆ ವ್ಯಾಪ್ತಿಯ ತುಂಬೆ ಜಂಕ್ಷನ್, ಪಾಣೆಮಂಗಳೂರು, ಶಾಂತಿಯಂಗಡಿ,

ಬಿ.ಸಿ ರೋಡ್ & ಇತರೆ ಪ್ರಮುಖ ಪ್ರದೇಶಗಳಲ್ಲಿ ಹಾಗೂ  ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಫರಂಗಿಪೇಟೆ, ಕಂಪನಮಜಲು ಹಾಗೂ ಇತರೆ ಪ್ರಮುಖ ಸ್ಥಳಗಳಲ್ಲಿ ಆರ್.ಎ.ಎಫ್ ಪಡೆಯಿಂದ ಮತ್ತು ಸ್ಥಳೀಯ ಠಾಣಾ ಅಧಿಕಾರಿ/ಸಿಬ್ಬಂದಿಗಳಿಂದ ಪಥಸಂಚಲನ ನಡೆಸಲಾಯಿತು.

ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಅಮ್ಮೆಮಾರ್ & ಇತರೆ ಪ್ರಮುಖ ಪ್ರದೇಶಗಳಲ್ಲಿ ಆರ್.ಎ.ಎಫ್ ಪಡೆಯಿಂದ ಮತ್ತು ಸ್ಥಳೀಯ ಠಾಣಾ ಅಧಿಕಾರಿ/ಸಿಬ್ಬಂದಿಗಳಿಂದ ಪಥಸಂಚಲನ ನಡೆಸಲಾಯಿತು.