ಮಂಗಳೂರು:  ಕಂಕನಾಡಿಯ ಮಸೀದಿ ಬಳಿಯ ರಸ್ತೆಯಲ್ಲಿ ಮೇ 24‌ ರಂದು ನಡೆದಿದ್ದ ನಮಾಝ್ ಹಿನ್ನಲೆ ಸುಮೋಟೊ ಪ್ರಕರಣ ದಾಖಲಿಸಿದ್ದಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಗೆ ಕಡ್ಡಾಯ ರಜೆಯ ಶಿಕ್ಷೆ ವಿಧಿಸಿದ್ದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ ನೀಡಿದ್ದಾರೆ.ಕೇಸ್ ದಾಖಲಿಸಿದ್ದಕ್ಕೆ ಮುಸ್ಲಿಮರ ಆಕ್ಷೇಪ ಹಿನ್ನೆಲೆ,ಕದ್ರಿ ಪಿಐ ಸೋಮಶೇಖರ್ ಗೆ ಕಡ್ಡಾಯ ರಜೆ ಶಿಕ್ಷೆ ನೀಡಲಾಗಿದೆ.

ಮಂಗಳೂರಿನ ಕಂಕನಾಡಿಯ ಮಸೀದಿ ಬಳಿಯ ರಸ್ತೆಯಲ್ಲಿ ಮೇ 24‌ ರಂದು ನಮಾಝ್ ಮಾಡಿದಕ್ಕೆ ಕದ್ರಿ ಪೊಲೀಸರು ಸ್ವಯಂ ಪ್ರೇರಿತವಾಗಿ (ಸುಮೋಟೊ)ಪ್ರಕರಣ ದಾಖಲಿಸಿಕೊಂಡಿದ್ದಾರೆ.ಐಪಿಸಿ 341,283,143,149ನಡಿ ಪ್ರಕರಣ ದಾಖಲಿಸಿದ್ದರು.
ಇದಕ್ಕೆ ಕರಾವಳಿಯ ಕಾಂಗ್ರೆಸ್ ಅಲ್ಪಸಂಖ್ಯಾತರು, ಮುಸ್ಲಿಂ ವಲಯ ಮತ್ತು ಪ್ರಗತಿಪರರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.