ದಕ್ಷಿಣ ಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ ಇದೀಗ ಯುಟ್ಯೂಬರ್ ಸಮೀರ್ ಎಂಡಿ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ಆತನ ಮನೆಯ ಮುಂದೆ ಆಗಮಿಸಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣದ ಬಗ್ಗೆ ಪ್ರಚೋದನಕಾರಿ ವಿಡಿಯೋ ಮಾಡಿದ್ದ ಯೂಟ್ಯೂಬರ್ ಎಂಡಿ ಸಮೀರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಎಫ್ಐಆರ್ ಹಾಕಿರುವ ಪೊಲೀಸರು ಆತನನ್ನು ವಶಕ್ಕೆ ಪಡೆಯಲು ಬೆಂಗಳೂರಿನ ಬನ್ನೇರುಘಟ್ಟದ ನಿವಾಸದ ಬಳಿ ಆಗಮಿಸಿದ್ದಾರೆ.
ಸಮೀರ್ ಎಐ ಬಳಸಿ ಅವಹೇಳನಕಾರಿ ವಿಡಿಯೋಗಳನ್ನು ಪ್ರಕಟಿಸಿದ್ದಾರೆ. ಪ್ರಕರಣದ ಬಗ್ಗೆ ತಪ್ಪು ಮಾಹಿತಿ ಹರಡಿದ್ದಾರೆ ಎಂದು ದೂರುದಾರರು ಆರೋಪ ಮಾಡಿದ್ದರು. ಇನ್ನು ಇತ್ತೀಚೆಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಭಕ್ತರು ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಸಮೀರ್ನನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಸಮೀರ್ನ ವಿಡಿಯೋಗಳು ಕೋಟ್ಯಂತರ ಹಿಂದೂ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

