ಮಂಜೇಶ್ವರ: ಕಾರಿನ ಬಾನೆಟ್‌ನಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 10 ಲಕ್ಷ ರೂ.ಗಳನ್ನು ತಲಪಾಡಿಯಿಂದ ಮಂಜೇಶ್ವರ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಮಂಗಳೂರು ಭಾಗದಿಂದ ಬರುತ್ತಿದ್ದ ಕಾರನ್ನು ತಡೆದು ತಪಾಸಣೆ ಮಾಡಿದಾಗ ದಾಖಲೆ ಪತ್ರಗಳಿಲ್ಲದ 10 ಲಕ್ಷ ರೂ. ಪತ್ತೆ ಯಾಗಿದ್ದು ವಶಪಡಿಸಿಕೊಳ್ಳಲಾಗಿದೆ.
ನ. 16ರಂದು ಸಂಜೆ ತಲಪಾಡಿಯಲ್ಲಿ ಪೊಲೀಸರು ನಡೆಸಿದ ವಾಹನ ತಪಾಸಣೆಯಲ್ಲಿ ದಾಖಲೆ ಪತ್ರಗಳಿಲ್ಲದೆ ಸಾಗಿಸುತ್ತಿದ್ದ 13 ಲಕ್ಷ ರೂ. ಪತ್ತೆ ಹಚ್ಚಿ ವಶಪಡಿಸಲಾಗಿತ್ತು. ಸ್ಥಳೀಯಾಡಳಿತ ಚುನಾವಣೆ ಹಿನ್ನೆಲೆಯಲ್ಲಿ ತಪಾಸಣೆ ಬಿಗುವಾಗಿದೆ.

