ಮಂಗಳೂರು: ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ, ಸಪೋರ್ಟ್ ಮಾಡಿ ಎಂದು ಪ್ರಚೋದನಕಾರಿ ಕಮೆಂಟ್ ಹಾಕಿರುವ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಂಕರ್11916 ಎಂಬ ಇನ್ಸಾಗ್ರಾಂ ಖಾತೆಯಲ್ಲಿ “ಸಪೋರ್ಟ್ ಮಾಡಿ ದ್ರೋ ಉಳ್ಳಾಲ ಮಸೀದಿ ಹತ್ರ ಬಾಂಬ್ ಬ್ಲಾಸ್ಟ್ ಮಾಡ್ತೀನಿ” ಎಂಬ ಪ್ರಚೋದನಕಾರಿ ಸಂದೇಶ ಹಾಕಲಾಗಿದ್ದು, ಈ ಪೋಸ್ಟ್ ವೈರಲ್ ಆಗಿತ್ತು. ಸೋಮವಾರ (ಮಾ.2) ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೀಗ ಮಂಗಳವಾರ (ಮಾರ್ಚ್ 3) ಭಟ್ಕಳ ನಿವಾಸಿ ಶಂಕರ್ ಮಸ್ತಪ್ಪ ಮೊಗೆರ್ (35 ವ) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನನ್ನು ವಶಕ್ಕೆ ಪಡೆಯಲಾಗಿದೆ.

