ಬೆಂಗಳೂರು: ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತ ಇಬ್ಬರ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​ ಸಲ್ಲಿಸಿದೆ.

ಪ್ರಕರಣ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್​ಗೆ ಆಶ್ರಯ ನೀಡಿದ್ದ ಹಿನ್ನೆಲೆ ಮನ್ಸೂರ್ ಪಾಷಾ ಮತ್ತು ಹೆಚ್​ವೈ ರಿಯಾಜ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲಾಗಿದೆ.

ಸಕಲೇಶಪುರದಲ್ಲಿ ಮುಸ್ತಫಾ ಪೈಚಾರ್​ಗೆ ಮನ್ಸೂರ್, ರಿಯಾಜ್​ ಆಶ್ರಯ ನೀಡಿದ್ದರು. ಮೇ 5ರಂದು ಸಕಲೇಶಪುರದಲ್ಲಿ ಮುಸ್ತಫಾ ನನ್ನು ಬಂಧಿಸಿದ್ದು, ವಿದೇಶಕ್ಕೆ ಪರಾರಿಯಾಗುಲು ಯತ್ನಿಸಿದ್ದ ರಿಯಾಜ್​ ನನ್ನು ಜೂ.3ರಂದು ಮುಂಬೈ ಏರ್​​ಪೋರ್ಟ್​ನಲ್ಲಿ ಬಂಧಿಸಲಾಗಿತ್ತು.

ನನ್ನ ಪತಿಯ ಹತ್ಯೆಯಲ್ಲಿ ಮುಸ್ತಫಾ ಪೈಚಾರ್​ನೇ ಪ್ರಮುಖ ಆರೋಪಿಯಾಗಿದ್ದಾನೆ. ಅವನನ್ನು ಬಂಧಿಸಿದ್ದಕ್ಕೆ ನಮಗೆ ತುಂಬಾ ಖುಷಿಯಾಗಿದೆ ಎಂದು ಪ್ರವೀಣ ನೆಟ್ಟಾರು ಪತ್ನಿ ನೂತನಾ ಹೇಳಿದ್ದರು. ಈ ಪ್ರಕರಣದ ಎಲ್ಲ ಆರೋಪಿಗಳಿಗೂ ಮರಣ ದಂಡನೆಯಾಗಬೇಕು. ಸಮಾಜದಲ್ಲಿ ಇಂತಹ ಪ್ರಕರಣ ಮರುಕಳಿಸಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.  ‌ ಪ್ರವೀಣ್ ನೆಟ್ಟಾರು ಕೊಲೆ ಕೇಸ್​ನಲ್ಲಿ ಇದುವರೆಗೆ ಎನ್​ಐಎ 21 ಆರೋಪಿಗಳನ್ನು ಅರೆಸ್ಟ್ ಮಾಡಿ ಆರೋಪಿಗಳ ವಿರುದ್ದ ಚಾರ್ಶೀಟ್ ಸಲ್ಲಿಕೆ ಮಾಡಿತ್ತು.