ಮಂಗಳೂರು : ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪಿ.ಎಂ.ರಾಹತ್ ಯೋಜನೆಯನ್ನೂ ಜಾರಿಗೆ ತರುವ ಪ್ರಕ್ರಿಯೆ ನಡೆಯುತ್ತಿದೆ. ಈ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಒಂದೂವರೆ ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಒದಗಿಸಲಾದರೆ, ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಒಂದು ಲಕ್ಷ ರೂಪಾಯಿ ನೀಡಲಿದೆ.

ಮೋಟಾರು ವಾಹನ ಕಾಯ್ದೆಯಡಿ ಅಪಘಾತ ಸಂತ್ರಸ್ತರಿಗೆ ಅಗತ್ಯ ತುರ್ತು ಚಿಕಿತ್ಸೆ ಒದಗಿಸುವುದನ್ನು ಆಸ್ಪತ್ರೆಗಳು ನಿರಾಕರಿಸುವಂತಿಲ್ಲ. ಈ ಯೋಜನೆಯಲ್ಲಿ ಎಪಿಎಲ್ ಅಥವಾ ಬಿಪಿಎಲ್ ಎನ್ನುವ ಭೇದವಿಲ್ಲ ಎಂದು ಡಾ.ತಿಮ್ಮಯ್ಯ ಮಾಹಿತಿ ನೀಡಿದರು.