ಮಂಗಳೂರು: ಗೋವಂಶದ ಕುರ್ಬಾನಿ ಆಗದ ಹಾಗೆ ಹಾಗೂ ಹಿಂಸಾತ್ಮಕ ಗೋಸಾಗಾಟ ತಡೆಯುವಂತೆ ಕೋರಿ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಛೇರಿಯಲ್ಲಿ ಪ್ರಾಂತ ಗೋರಕ್ಷಾ ಪ್ರಮುಖರಾದ ಸುನಿಲ್ ಕೆ ಆರ್ ನೇತ್ರತ್ವದಲ್ಲಿ ಪತ್ರಿಕಾಗೋಷ್ಠಿ ನಡೆಯಿತು.

ಸುದ್ಧಿಗೋಷ್ಠಿ ಮಾತನಾಡಿದ ಅವರು, ರಾಜ್ಯ ಮತ್ತು ದೇಶದ ಕಾನೂನಿನನ್ವಯ ಹಾಗೂ Animal welfare board of India ಇದರ ಸುತ್ತೋಲೆ ಅನ್ವಯ ಹಾಗೆಯೇ ಸುಪ್ರೀಂ ಕೋರ್ಟ್ ಆದೇಶದನ್ವಯ ಬಕ್ರೀದ್ ಮತ್ತಿತರ ಹಬ್ಬ ಸಂದರ್ಭಗಳಲ್ಲಿ ಜಾನುವಾರು ಮತ್ತು ಇತರೆ ಪ್ರಾಣಿಗಳ ಹತ್ಯೆ ನಿಷೇಧವಿದ್ದು ಅದನ್ನು ಕಟ್ಟು ನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಬೇಕೆಂದು ಸರಕಾರಕ್ಕೆ ಒತ್ತಾಯಿಸಿದರು.

ರಾಜ್ಯದಲ್ಲಿ ಕರ್ನಾಟಕ ರಾಜ್ಯ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಕುರ್ಬಾನಿಗೆ ನಿಷೇಧವಿದೆ. ಹಾಗೂ ಕುರ್ಬಾನಿಗೆ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಅಕ್ರಮವಾಗಿ ಗೋವನ್ನು ಸಾಗಾಟ ಮಾಡ್ತ ಇದ್ರೆ ಅವರ ವಿರುದ್ದ ಕ್ರಮವನ್ನು ಕೈಗೊಳ್ಳಬಹುದು.

ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಅಕ್ರಮ ಜಾನುವಾರ ಸಾಗಾಟವಾಗದಂತೆ ನಾಕಾಬಂದಿ ಹಾಕಬೇಕು. ಕಿವಿಯೋಲೆ ಇಲ್ಲದ ಜಾನುವಾರುಗಳನ್ನು ಸಾರ್ವಜನಿಕ ಜಾಗದಲ್ಲಿ ಶೇಖರಿಸಿ ಇಡದಂತೆ, ಮೇಯಲು ಬಿಡದಂತೆ, ಸೂರ್ಯಾಸ್ತದಿಂದ ಸೂರ್ಯೋದಯವರೆಗೆ ಕಾಲ್ನಡಿಗೆಯಲ್ಲಿ ಜಾನುವಾರು ಸಾಗಾಟ ನಿಷೇಧವಿದ್ದು ಹಾಗಾಗಿ ಈ ಸಮಯದಲ್ಲಿ ಸಾಗಾಟ ಮಾಡದಂತೆ ಸಾರ್ವಜನಿಕರಿಗೆ ಎಚ್ಚರಿಕೆಯನ್ನು ನೀಡಿದರು. ಸುದ್ದಿಗೋಷ್ಠಿಯಲ್ಲಿ ದಿನೇಶ್ ಪೈ, ಎಚ್ ಕೆ ಪುರುಷೋತ್ತಮ , ಪ್ರದೀಪ್ ಸರಿಪಲ್ಲ, ಹರೀಶ್ ಶೇಟ್ ಮುಂತಾದವರು ಉಪಸ್ಥಿತರಿದ್ದರು