ಪುತ್ತೂರು: ಖಾಸಗಿ ಬಸ್ಸೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಗು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಬೆಳಗ್ಗೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಕಬಕ ಸಮೀಪದ ಮುರ ಜಂಕ್ಷನ್ ನಲ್ಲಿ ನಡೆದಿದೆ.

ಪುತ್ತೂರು ತಾಲೂಕಿನ ಪಡ್ನೂರು ಸಮೀಪದ ಅಂಡೆಪುಣಿ ನಿವಾಸಿ ಈಶ್ವರ್ ಭಟ್, ಅವರ ಪುತ್ರಿ ಅಪೂರ್ವಾ ಹಾಗೂ ಅವರ ಪುಟಾಣಿ ಮಗು ಗಾಯಗೊಂಡಿದೆ.

ಈಶ್ವರ ಭಟ್ ಅಂಡೆಪುನಿ ಅವರ ಮನೆಯಲ್ಲಿ ಇಂದು ಕಾರ್ಯಕ್ರಮವಿದ್ದು, ಅದಕ್ಕಾಗಿ ಅವರ ಮಗಳು ಅಪೂರ್ವಾ ಹಾಗೂ ಮೊಮ್ಮಗಳು ಬೆಂಗಳೂರಿನಿಂದ ಪುತ್ತೂರಿಗೆ ಆಗಮಿಸಿದ್ದರು. ಅವರನ್ನು ಪುತ್ತೂರು ಪೇಟೆಯಿಂದ ಈಶ್ವರ್ ಭಟ್ ತನ್ನ ವ್ಯಾಗನರ್ ಕಾರಿನಲ್ಲಿ ಮನೆಗೆ ಕರೆತರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.