ಬೆಳ್ತಂಗಡಿ: ಚಾರ್ಮಾಡಿ ಘಾಟ್‌ನ ನಾಲ್ಕನೇ ತಿರುವಿನಲ್ಲಿ ಖಾಸಗಿ ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಉಜಿರೆಯಿಂದ ಕೊಟ್ಟಿಗೆಹಾರ ಕಡೆಗೆ ಬಸ್ ಚಲಿಸುತ್ತಿದ್ದಾಗ, ಹೇರ್ ಪಿನ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಗಾಯಗೊಂಡವರು ಮುಖ್ಯವಾಗಿ ಆಂಧ್ರಪ್ರದೇಶ ಮತ್ತು ತುಮಕೂರಿನ ಪಾವಗಡ ನಿವಾಸಿಗಳಾಗಿದ್ದು, ಮದುವೆ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಹಿಂತಿರುಗುತ್ತಿದ್ದರು. ಅಪಘಾತದ ನಂತರ, ಸಹ ಪ್ರಯಾಣಿಕರು ಮತ್ತು ಸಾರ್ವಜನಿಕರು ಗಾಯಾಳುಗಳ ಸಹಾಯಕ್ಕೆ ಧಾವಿಸಿದರು.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳು ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.