ಮಂಗಳೂರು: ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಸಿಪಿಐಎಂ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಬೇಂದೂರ್‌ವೆಲ್ ಸರ್ಕಲ್‌ನಲ್ಲಿ ಜಮಾಯಿಸಿದ ಸಿಪಿಐಎಂ ಮುಖಂಡರು ಹಾಗೂ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕರಾವಳಿ ಭಾಗದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿದ ಪ್ರತಿಭಟನಾಕಾರvರು, ಜಿಲ್ಲೆಗಳ ಪ್ರಧಾನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಜನಕೇಂದ್ರಿತ ಯೋಜನೆಗಳನ್ನು ರೂಪಿಸಬೇಕು ಎಂದು ಒತ್ತಾಯಿಸಿದರು.
ಮಂಗಳೂರಿನಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆ ಈ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಸಿಪಿಐಎಂ ಪ್ರತಿಭಟನೆ ನಡೆಸಲಾಯಿತು. ಬೇಂದೂರ್‌ವೆಲ್ ಸರ್ಕಲ್‌ನಲ್ಲಿ ಸಿಪಿಐಎಂ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕರಾವಳಿ ಭಾಗದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಮುಖ ಸಮಸ್ಯೆಗಳು ಇನ್ನೂ ಬಗೆಹರಿದಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸಚಿವ ಸಂಪುಟ ಸಭೆಯಲ್ಲಿ ಈ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಿ, ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜಿಲ್ಲೆಗಳ ಪ್ರಧಾನ ಸಮಸ್ಯೆಗಳನ್ನು ಗುರುತಿಸಿ, ಜನರ ಅಗತ್ಯಗಳಿಗೆ ಸ್ಪಂದಿಸುವ ಜನಕೇಂದ್ರಿತ ಯೋಜನೆಗಳನ್ನು ರೂಪಿಸಬೇಕು. ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಬೇಕು ಎಂಬುದು ಸಿಪಿಐಎಂನ ಪ್ರಮುಖ ಬೇಡಿಕೆಯಾಗಿದೆ.
ಈ ನಡುವೆ ಪ್ರತಿಭಟನೆ ತಡೆಯಲು ಪೊಲೀಸರು ಮುಂದಾದರು. ಸಿಪಿಐಎಂ ಮುಖಂಡರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಕರಾವಳಿಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿದರು. ಸಚಿವ ಸಂಪುಟ ಸಭೆಗೆ ಮೆರವಣಿಗೆ ನಡೆಸಿ ಆಗ್ರಹ ಪತ್ರ ಸಲ್ಲಿಸಲು ಸಿಪಿಐಎಂ ಮುಂದಾಗಿತ್ತು.
ಆದರೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಒಟ್ಟಿನಲ್ಲಿ, ಮಂಗಳೂರಿನಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯತ್ತ ಕರಾವಳಿಯ ಪ್ರಮುಖ ಸಮಸ್ಯೆಗಳ ಪರಿಹಾರದ ನಿರೀಕ್ಷೆ ಹೆಚ್ಚಾಗಿದ್ದು, ಸರ್ಕಾರ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

