ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಅರಸಮಜಲು ಎಂಬಲ್ಲಿ ಬುಧವಾರ ಸಂಜೆ ಭೀಕರ ದುರಂತವೊಂದು ಸಂಭವಿಸಿದೆ.

ಸ್ನೇಹಿತರೊಂದಿಗೆ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ 16 ವರ್ಷದ ಪಿಯುಸಿ ವಿದ್ಯಾರ್ಥಿ ನಿಶಾಂತ್ ನದಿಯ ಸುಳಿಗೆ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾರೆ. ನದಿಯ ಆಳ ತಿಳಿಯದೆ ಈಜಲು ಹೋದಾಗ ಈ ಅನಾಹುತ ಸಂಭವಿಸಿದೆ ಎಂದು ತಿಳಿದುಬಂದಿದೆ.

ವಿಷಯ ತಿಳಿದ ತಕ್ಷಣ ಸ್ಥಳೀಯರು ರಕ್ಷಣೆಗೆ ಧಾವಿಸಿದರೂ ಅಷ್ಟರಲ್ಲಾಗಲೇ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿದ್ದು, ತನಿಖೆ ಮುಂದುವರಿಸಿದ್ದಾರೆ.

View this post on Instagram

A post shared by News Karnataka (@newskarnataka)