ಪುತ್ತೂರು: ಮುಸ್ಲಿಂ ವಿದ್ಯಾರ್ಥಿನಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಆ 20 ರ ಇಂದು ನಡೆದಿದೆ. ಬನ್ನೂರು ಮೂಲದ ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ ಆದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ವಿದ್ಯಾರ್ಥಿನಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಿಂದೂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿ ಬ್ಲೇಡ್ ನಲ್ಲಿ ವಿದ್ಯಾರ್ಥಿನಿಯ ಕೈಗೆ ಬ್ಲೇಡ್ ನಿಂದ ಇರಿದು ಪರಾರಿಯಾಗಿದ್ದಾನೆ.
ನಿನ್ನನ್ನು ಲವ್ ಮಾಡುತ್ತೇನೆ ಎಂದು ವಿದ್ಯಾರ್ಥಿ ಹೇಳಿದ್ದ. ಆ ಸಂದರ್ಭದಲ್ಲಿ ವಿದ್ಯಾರ್ಥಿಯನ್ನು ವಿದ್ಯಾರ್ಥಿನಿ ನಿಂದಿದ್ದಾಳೆ. ಇದರಿಂದ ರೋಸಿ ಹೋದ ವಿದ್ಯಾರ್ಥಿ ವಿದ್ಯಾರ್ಥಿನಿಯ ಕೈಗೆ ಬ್ಲೇಡ್ ನಿಂದ ಇರಿದು ಪರಾರಿಯಾಗಿದ್ದಾನೆ. ಸದ್ಯ ವಿದ್ಯಾರ್ಥಿನಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಇನ್ನು ಆಸ್ಪತ್ರೆಯಲ್ಲಿ ಹೆಸರು ಬದಲಾಯಿಸಿ ಹೇಳುವಂತೆ ಶಿಕ್ಷಕಿ ಒತ್ತಡ ಹೇರಿದ್ದಾರೆ. ಕೈಗೆ ಗಾಜು ತಾಗಿ ಗಾಯವಾಗಿದೆ ಎಂದು ಹೇಳಲು ಒತ್ತಾಯಿಸಿದ್ದಾರೆ ಎಂದು
ವಿದ್ಯಾರ್ಥಿನಿ ಆರೋಪಿಸಿದ್ದಾರೆ. ಆಸ್ಪತ್ರೆಯ ಮುಂದೆ ಸೇರಿದ ಜನಸ್ತೋಮದಿಂದ ಸ್ಥಳದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ. ಘಟನಾ ಸ್ಥಳಕ್ಕೆ ತೆರಳಿದ ಪುತ್ತೂರು ಪೊಲೀಸರು ಸಿ ಸಿ ಟಿವಿ ಪರಿಶೀಲನೆ ನಡೆಸಿದ್ದು, ಚೂರಿ ಇರಿದ ಶಾಲಾ ವಿದ್ಯಾರ್ಥಿ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

