ಪುತ್ತೂರು: ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ.ಈ ಘಟನೆ ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಅವರ ಮನೆಯಲ್ಲಿ ಘಟನೆ‌ ನಡೆದಿದೆ.

ಸ

ರೆಫ್ರಿಜರೇಟರ್ ಸ್ಫೋಟಗೊಂಡ ಹಿನ್ನಲೆ ಅಗ್ನಿ ಅವಘಡ ಸಂಭವಿಸಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಈ ಘಟನೆ ಸಂಭವಿಸಿದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳದವರೂ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.