ಮಂಗಳೂರು : ದ.ಕ. ಜಿಲ್ಲಾ ಖಾಝಿ ಅಲ್ಲಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(78) ಇಂದು (ಜೂ.23) ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕೆಲವು ಸಮಯದಿಂದ ಅನಾರೋಗಕ್ಕೀಡಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರಿಂದು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

2010ರಲ್ಲಿ ದ.ಕ. ಜಿಲ್ಲಾ ಖಾಝಿಯಾಗಿ ಅಧಿಕಾರ ಸ್ವೀಕರಿಸಿದ್ದ ತ್ವಾಕಾ ಉಸ್ತಾದ್, ದ.ಕ. ಮತ್ತು ಕೇರಳ ರಾಜ್ಯದ ಸುಮಾರು 200ಕ್ಕೂ ಅಧಿಕ ಜಮಾಅತ್ ಗಳ ಖಾಝಿಯಾಗಿದ್ದರು. ಸಮಸ್ತ ಕಾಸರಗೋಡು ಜಿಲ್ಲಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಮಂಗಳೂರು ಕೇಂದ್ರ ಜುಮಾ ಮಸ್ಟಿದ್ ನಲ್ಲಿ ಮೃತದೇಹದ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಖಾಝಿಯವರ ಕುಟುಂಬದ ಸದಸ್ಯರ ಜೊತೆ ಚರ್ಚಿಸಿದ ಬಳಿಕ ದಫನ ಕಾರ್ಯದ ಸ್ಥಳ ನಿಗದಿಪಡಿಸಲಾಗುವುದು ಎಂದು ಕೇಂದ್ರ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ತಿಳಿಸಿದ್ದಾರೆ.

View this post on Instagram

A post shared by News Karnataka (@newskarnataka)