ಮಂಗಳೂರು: ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕೋ ಕೆಲಸ ಮಾಡ್ತಾ ಇದಾರೆ. ರಾಜ್ಯಪಾಲರು ರಾಜ ಭವನ ದುರುಪಯೋಗ ಮಾಡ್ತಿದಾರೆ ಎಂದು ಕಾಂಗ್ರೆಸ್ ಎಂಎಲ್ ಸಿ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಸಂವಿಧಾನದ ಚೌಕಟ್ಟು ಬಿಟ್ಟು ಬಿಜೆಪಿ ನಿರ್ದೇಶನದಂತೆ ಕೆಲಸ ಮಾಡಲು ಆಗಲ್ಲ. ರಾಜ್ಯಪಾಲರು ಬಿಜೆಪಿ ಅಧ್ಯಕ್ಷರಂತೆ ಕೆಲಸ ಮಾಡ್ತಾ ಇದಾರೆ. ಈ ಹಿಂದೆ ಬಿಜೆಪಿ ಆಪರೇಷನ್ ಕಮಲ ಮೂಲಕ ಸರ್ಕಾರ ಕೆಡವುತ್ತಿತ್ತು. ಆದರೆ ಈಗ ಬೇರೆ ವಾಮಾಮಾರ್ಗದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸ್ತಾ ಇದಾರೆ. ಸದ್ಯ ಹೈಕೋರ್ಟ್ ರಿಲೀಫ್ ಕೊಟ್ಟಿದೆ, ನ್ಯಾಯಾಂಗ ಹೋರಾಟ ಆಗ್ತಿದೆ.

ಯಡಿಯೂರಪ್ಪ ಪ್ರಕರಣ 20 ಕೋಟಿ ಚೆಕ್ ಮೂಲಕ ಲಂಚ ಪಡೆದಿರೋದು. ಗಡೀಪಾರಾಗಿದ್ದ ಅಮಿತ್ ಶಾ ಕೂಡ ಮಂತ್ರಿಯಾಗಿಲ್ವಾ?. ಬಿಜೆಪಿ ನಾಯಕರ ಮೇಲೆ ಗಂಭೀರ ಆರೋಪಗಳಿತ್ತು, ಈ ಆರೋಪ ಕಪೋಲಕಲ್ಪಿತ. ರಾಜ್ಯಪಾಲರು ಈ ಹಿಂದೆ ದಲಿತ ರಾಜಕಾರಣಿ ಆಗಿದ್ದವರು, ಗೆಹ್ಲೋಟ್ ಅವರನ್ನು ನಾನು ಹತ್ತಿರದಿಂದ ಬಲ್ಲೆ. ಬಿಜೆಪಿಯವರಿಗೆ ದಲಿತರ ಮೇಲೆ ಪ್ರೀತಿ ಇದ್ರೆ ಸಂವಿಧಾನ ಬದಲಾವಣೆ ಅಂತ ಯಾಕೆ ಮಾತನಾಡ್ತಿದ್ರು. ನಾವು ಪ್ರತಿಭಟನೆ ಮಾಡಿದ್ದೇವೆ, ಯಾವುದೇ ಗಲಾಟೆ ಮಾಡಿಲ್ಲ. ಐವನ್ ಡಿಸೋಜಾ ಏನು ಹೇಳಿದ್ದಾರೆ ಅಂತ ನನಗೆ ಸರಿಯಾಗಿ ಗೊತ್ತಿಲ್ಲ. ಬಾಂಗ್ಲಾದೇಶ ಮತ್ತು ಭಾರತವನ್ನು ನಾವು ಒಂದು ಮಾಡೋದು ಬೇಡ. ಸಂವಿಧಾನಿಕ ಹುದ್ದೆಯಲ್ಲಿರೋ ವಿರುದ್ದ ನಾವು ಹೋರಾಟ ಮಾಡೋದು ಸರಿಯಲ್ಲ. ಅದರೆ ಅವರು ತೆಗೆದುಕೊಂಡ ನಿರ್ಧಾರದ ವಿರುದ್ದ ಕಾನೂನು ಹೋರಾಟ ಮಾಡ್ತಾ ಇದೀವಿ ಎಂದಿದ್ದಾರೆ.