ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ವ್ಯಾಪಕ ಮಳೆಯಾಗಿದೆ. ಸುಳ್ಯ, ಸುಬ್ರಹ್ಮಣ್ಯ, ಕಡಬ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲ ಮತ್ತು ಮಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಕೆಲವೆಡೆ ಬಿಟ್ಟು ಬಿಟ್ಟು ಮಳೆಯಾದರೆ, ಬಹುತೇಕ ಕಡೆಗಳಲ್ಲಿ ದಿನವಿಡೀ ಮಳೆ ಸುರಿದಿದೆ.
ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗ ಮಧ್ಯದ ಶಿರಿಬಾಗಿಲು ಹಾಗೂ ಎಡಕುಮೇರಿ, ಎಡಕುಮೇರಿ-ಕಡಗರವಳ್ಳಿ, ಕಡಗರವಳ್ಳಿ-ದೋಣಿಗಾಲ್ ಭಾಗಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನಲೆ ಭೂಕುಸಿತ ಉಂಟಾಗಿದೆ.
ಹೀಗಾಗಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಆ. 18ರಂದು ರೆಡ್ ಅಲರ್ಟ್ ಇರಲಿದ್ದು, ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಆ. 17, 19 ಹಾಗೂ 20ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆ. 21, 22ರಂದು ಎಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

