ದಕ್ಷಿಣ ಕನ್ನಡ : ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ, ಸಹಕಾರ ರತ್ನ ಡಾ ಎಂ ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸೆ.14ರಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳ ಧರ್ಮಜಾಗೃತಿ ಯಾತ್ರೆ ನಡೆಯಲಿದೆ ಎಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ತಿಳಿಸಿದ್ದಾರೆ.

ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, 1500ಕ್ಕೂ ಅಧಿಕ ಸಹಕಾರಿ ಸಂಘಗಳು, 3000ಕ್ಕೂ ಅಧಿಕ ವಾಹನಗಳು ಇದರಲ್ಲಿ ಭಾಗಿಯಾಗಲಿದ್ದು, ಮಧ್ಯಾಹ್ನ 12 ಗಂಟೆಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಡಲಿದೆ. ಉಡುಪಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಹಕಾರಿ ಬಂಧುಗಳು ಭಾಗವಹಿಸಲಿದ್ದು, ಡಾ ಎಂ ಎನ್ ರಾಜೇಂಧ್ರ ಕುಮಾರ್ ಚಾಲನೆ ನೀಡಲಿರುವರು ಎಂದರು.

ಸಹಬಾಳ್ವೆಯ ಪ್ರತೀಕವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಾಚೀನ ಪರಂಪರ್ಯವನ್ನು ಹೊಂದಿರುವ ಕ್ಷೇತ್ರವಾಗಿದ್ದು, ಇಂತಹ ಪಜನೀಯ ಕ್ಷೇತ್ರಕ್ಕೆ ಕಳಂಬಕ ತರುತ್ತಿರುವ ದುಷ್ಟಶಕ್ತಿಗಳ ಷಡ್ಯಂತ್ರವನ್ನು ವಿರೋಧಿಸಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳು ಪಕ್ಷಾತೀತವಾಗಿ ಹಾಗೂ ಜಾತ್ರಯತೀತವಾಗಿ ಒಗ್ಗಟ್ಟಾಗಿ ಜಾಥ ನಡೆಯಲಿದೆ ಎಂದರು.