ಮಂಗಳೂರು: ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಉರ್ವಾ ಇಲ್ಲಿ ವಾರ್ಷಿಕೋತ್ಸವ ಸಮಾರಂಭವನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು.


ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮಕ್ಕೆ ಅತಿಥಿಗಳನ್ನು ಪುಷ್ಪಗುಚ್ಚ ನೀಡಿ ಸ್ವಾಗತಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ನಮ್ಮ ಶಾಲಾ ಸಂಚಾಲಕರಾದ ವಂ. ಬೆಂಜಮಿನ್ ಪಿಂಟೊ ಅವರು ಮಕ್ಕಳು ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಿ ಉತ್ತಮ ಮೌಲ್ಯಗಳನ್ನು ಬೆಳಸಬೇಕೆಂದು ತಿಳಿಸಿದರು. ಮುಖ್ಯೋಪಾದ್ಯಾಯರಾದ ಶ್ರೀ. ಅಲೋಶಿಯಸ್ ಡಿಸೋಜ ಹಾಗೂ ಮುಖ್ಯ ಅತಿಥಿ ಶ್ರೀ. ಮ್ಯಾಕ್ಸಿಮ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಯಿತು ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ, ಪೋಷಕರು ಮತ್ತು ರಕ್ಷಕ ಶಿಕ್ಷಕ ಸಂಘದ ಸದಸ್ಯರು ಭಾಗವಹಿಸಿ ಕಾರ್ಯಕ್ರಮವು ಯಶಸ್ವಿಯಾಗಿ ಮುಕ್ತಾಯಗೊಂಡಿತು. ಈ ಕಾರ್ಯಕ್ರಮವನ್ನು ಮಕ್ಕಳಾದ ಪ್ರಣವ್, ಪ್ರೇಕ್ಷಾ, ಮೇದ್ಯಾ ಹಾಗೂ ದೃತಿ ನಿರೂಪಿಸಿ, ಫಾತಿಮಾ ರಿಜಾ ಸ್ವಾಗತಿಸಿ, ತನೀಷ್ ರಾವ್ ಧನ್ಯವಾದ ಸಮರ್ಪಿಸಿದರು.